ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಶಾಲೆಯೊಂದರ ವಿಧ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಅದೇ ಶಾಲೆಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ.
ಅರುಣ್ ಕುಮಾರ್ ಬಂಧಿತ ಆರೋಪಿ. ವಿದ್ಯಾರ್ಥಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಅರುಣ್ ಕುಮಾರ್ ಬಗ್ಗೆ ಈ ಹಿಂದೆಯೇ ವಿಚಾರ ಬೆಳಕಿಗೆ ಬಂದು ಸಂಧಾನ ಮಾಡಲಾಗಿತ್ತು. ಆದರೂ ಅದೇ ಚಾಳಿ ಮುಂದುವರೆಸಿದ ಪರಿಣಾಮ ಬಾಲಕ ನೇರವಾಗಿ ಜಿಲ್ಲಾಡಳಿತಕ್ಕೆ ದೂರು ನೀಡಿದ್ದು, ಕೂಡಲೇ ಸ್ಪಂದಿಸಿದ ಜಿಲ್ಲಾಡಳಿತ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಬಾಲಕ ಸದ್ಯ ಬಾಲಮಂದಿರದ ಆಶ್ರಯದಲ್ಲಿದ್ದಾನೆ.