alex Certify ರೈಲಲ್ಲಿ ಆಘಾತಕಾರಿ ಘಟನೆ, ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಕಿಡಿಗೇಡಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲಲ್ಲಿ ಆಘಾತಕಾರಿ ಘಟನೆ, ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಕಿಡಿಗೇಡಿ ಅರೆಸ್ಟ್

ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾನೂನು ಪದವಿ ಓದುತ್ತಿರುವ ವಿದ್ಯಾರ್ಥಿನಿ ಕಳೆದ ಶುಕ್ರವಾರ ಕೇರಳದ ವರ್ಕಳದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ಬೆಳಗಿನ ಜಾವ ವಿದ್ಯಾರ್ಥಿನಿ ರೈಲಿನಲ್ಲಿ ಮಲಗಿದ್ದ ವೇಳೆ ಸಹಪ್ರಯಾಣಿಕನಾಗಿದ್ದ ಆರೋಪಿ ವಿದ್ಯಾರ್ಥಿನಿಯ ಮೈಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ.

ಆತನ ವಿಡಿಯೋ ಮಾಡಿದ ಯುವತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ಕು ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...