alex Certify ಮಾಡೆಲ್ ಖಾಸಗಿ ವಿಡಿಯೋ ತೋರಿಸಿ ಪದೇ ಪದೇ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಡೆಲ್ ಖಾಸಗಿ ವಿಡಿಯೋ ತೋರಿಸಿ ಪದೇ ಪದೇ ಲೈಂಗಿಕ ದೌರ್ಜನ್ಯ

ಬೆಂಗಳೂರು: ಪಾನೀಯದಲ್ಲಿ ಮತ್ತು ಬರುವ ಮಾತ್ರೆ ಬೆರೆಸಿ ಕೊಟ್ಟು ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಮಾಡೆಲ್ ಖಾಸಗಿ ವಿಡಿಯೋ ಸೆರೆಹಿಡಿದು ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಮೋದ್ ಯಾದವ್(23) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಯಶವಂತಪುರ ನಿವಾಸಿಯಾಗಿರುವ ಸಂತ್ರಸ್ತೆಯ ಕಾಲೇಜು ಸಹಪಾಠಿಯಾಗಿದ್ದ ಆರೋಪಿ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದ. ಇತ್ತೀಚೆಗೆ ಲಾಡ್ಜ್ ಗೆ ಕರೆದೊಯ್ದು ಪಾನೀಯದಲ್ಲಿ ಮತ್ತು ಬೆರೆಸುವ ಪದಾರ್ಥ ಬೆರೆಸಿಕೊಟ್ಟು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ಮಾಡಿಕೊಂಡ ಆರೋಪಿ ತಾನು ಕರೆದಾಗಲೆಲ್ಲ ಬರುವಂತೆ ಹೇಳಿದ್ದು, ಇಲ್ಲದಿದ್ದರೆ ಜಾಲತಾಣಗಳಲ್ಲಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿ ಅನೇಕ ಬಾರಿ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...