alex Certify ಮಾನವೀಯತೆ ಮೆರೆದ ಶಾಸಕ ಹಾಲಪ್ಪ: ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕಿಗೆ ಸಹಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ಶಾಸಕ ಹಾಲಪ್ಪ: ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕಿಗೆ ಸಹಾಯ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ನೆವಟೂರು ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಮೂಲಕ ಶಾಸಕ ಹರತಾಳು ಹಾಲಪ್ಪ ಮಾನವೀಯತೆ ಮೆರೆದಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರೊಂದಿಗೆ ಶಾಸಕ ಹರತಾಳು ಹಾಲಪ್ಪ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಇದೇ ಮಾರ್ಗದಲ್ಲಿ ಸ್ಕೂಟಿಯಲ್ಲಿ ಹೋಗುತ್ತಿದ್ದ ಶಿಕ್ಷಕಿ ದೀಪಾ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿ ಶಿಕ್ಷಕಿ ದೀಪಾ ರಿಪ್ಪನ್ ಪೇಟೆಗೆ ಹೋಗುವಾಗ ನೆವಟೂರು ಬಳಿ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಶಿಕ್ಷಕಿ ಗಾಯಗೊಂಡಿರುವುದನ್ನು ಇದೇ ಮಾರ್ಗದಲ್ಲಿ ಬರುತ್ತಿದ್ದ ಶಾಸಕರು ಗಮನಿಸಿ ಸಹಾಯ ಮಾಡಿದ್ದಾರೆ. ತಮ್ಮ ಕಾರ್ ನಲ್ಲಿಯೇ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...