
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿ.ವೈ. ರಾಘವೇಂದ್ರ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಇಂದು ಹಿರೇಮಗಳೂರು ಕಣ್ಣನ್, ಗಂಗಾವತಿ ಪ್ರಾಣೇಶ್, ಸುಧಾ ಬರಗೂರು ಅವರಿಂದ ‘ಹರಟೆ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಇಂದು ಸಂಜೆ 5:30ಕ್ಕೆ ಶಿವಮೊಗ್ಗ ನಗರದ ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೂ ಮುನ್ನ 30 ಜನ ವಿಶೇಷ ಚೇತನರಿಗೆ ವಾಹನ ವಿತರಣೆ ಮಾಡಲಾಗುತ್ತದೆ.
ಬಿ.ವೈ. ರಾಘವೇಂದ್ರ ಅವರ ಅಭಿಮಾನಿಗಳು, ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವಿಶೇಷ ಪೂಜೆ ಆಯೋಜಿಸಿದ್ದು, ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.