ತಾನು ಮಾಡದ ತಪ್ಪಿಗೆ ಸೌದಿಯಲ್ಲಿ ಬಂಧನಕ್ಕೊಳಗಾಗಿದ್ದ ಕನ್ನಡಿಗ ಹರೀಶ್ ಬಂಗೇರ 2 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ದೊರೆ ಮತ್ತು ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಹರೀಶ್ ಬಂಗೇರರನ್ನು ಬಂಧಿಸಲಾಗಿತ್ತು.
ಹರೀಶ್ ಬಂಗೇರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದ ಮೂಡಬಿದಿರೆ ಮೂಲಕ ಮುಸ್ಲಿಂ ಸಹೋದರರು ಸೌದಿ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಉಡುಪಿ ಸೆಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಕರಣ ಸಂಬಂಧ ಸೌದಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಕೇಂದ್ರ ಸಚಿವಾಲಯ 2 ವರ್ಷಗಳ ಬಳಿಕ ಸೌದಿ ಜೈಲಿನಿಂದ ಹರೀಶ್ರನ್ನು ಬಂಧಮುಕ್ತಗೊಳಿಸುವಲ್ಲಿ ಯಶಸ್ವಿಯಾಗಿದೆ. ಸೌದಿ ಜೈಲಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹರೀಶ್ ಬಂಗೇರರನ್ನು ಕುಟುಂಬಸ್ಥರು ಸ್ವಾಗತಿಸಿದ್ದಾರೆ.