alex Certify ಮಾಡದ ತಪ್ಪಿಗೆ ಸೌದಿ ಜೈಲಿನಲ್ಲಿದ್ದ ಕನ್ನಡಿಗ ಕೊನೆಗೂ ಬಂಧಮುಕ್ತ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಡದ ತಪ್ಪಿಗೆ ಸೌದಿ ಜೈಲಿನಲ್ಲಿದ್ದ ಕನ್ನಡಿಗ ಕೊನೆಗೂ ಬಂಧಮುಕ್ತ…..!

ತಾನು ಮಾಡದ ತಪ್ಪಿಗೆ ಸೌದಿಯಲ್ಲಿ ಬಂಧನಕ್ಕೊಳಗಾಗಿದ್ದ ಕನ್ನಡಿಗ ಹರೀಶ್​ ಬಂಗೇರ 2 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ದೊರೆ ಮತ್ತು ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಹರೀಶ್​ ಬಂಗೇರರನ್ನು ಬಂಧಿಸಲಾಗಿತ್ತು.

ಹರೀಶ್​ ಬಂಗೇರ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆದಿದ್ದ ಮೂಡಬಿದಿರೆ ಮೂಲಕ ಮುಸ್ಲಿಂ ಸಹೋದರರು ಸೌದಿ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್​ ಮಾಡಿದ್ದರು. ಉಡುಪಿ ಸೆಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣ ಸಂಬಂಧ ಸೌದಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಕೇಂದ್ರ ಸಚಿವಾಲಯ 2 ವರ್ಷಗಳ ಬಳಿಕ ಸೌದಿ ಜೈಲಿನಿಂದ ಹರೀಶ್​ರನ್ನು ಬಂಧಮುಕ್ತಗೊಳಿಸುವಲ್ಲಿ ಯಶಸ್ವಿಯಾಗಿದೆ. ಸೌದಿ ಜೈಲಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹರೀಶ್​ ಬಂಗೇರರನ್ನು ಕುಟುಂಬಸ್ಥರು ಸ್ವಾಗತಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...