alex Certify ಸಿದ್ಧರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ಶಾಸಕನ ವಿರುದ್ಧ ಮಾನನಷ್ಟ ಮೊಕದ್ದಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ಶಾಸಕನ ವಿರುದ್ಧ ಮಾನನಷ್ಟ ಮೊಕದ್ದಮೆ

ಮಂಗಳೂರು: ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ ಎಂದು ಸಿಎಂ ವಿರುದ್ಧ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಜಿಲ್ಲಾ ಕಾಂಗ್ರೆಸ್ ನಿರ್ಧರಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಹರೀಶ್ ಪೂಂಜಾ ಚುನಾವಣೆಯಲ್ಲಿ ಗೆಲ್ಲಲು 40% ಕಮಿಷನ್ ಹಣ ಖರ್ಚು ಮಾಡಿದ್ದಾರೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜಾ ಹಣದ ಹೊಳೆ ಹರಿಸಿದ್ದಾರೆ. ಸುಮಾರು 30 ರಿಂದ 40 ಕೋಟಿ ರೂಪಾಯಿ ಹಣ ಖರ್ಚು ಮಾಡಿ ಚುನಾವಣೆ ಗೆದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸರನ್ನು ಬುಕ್ ಮಾಡಿದ್ದರು. ನಮ್ಮ ಕಾರ್ಯಕರ್ತರ ಮೇಲೆ ಬೆಳ್ತಂಗಡಿಯಲ್ಲಿ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಹರೀಶ್ ಕುಮಾರ್ ದೂರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...