
ರಾಯಚೂರು: ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗಿದ್ದು, ಮತದಾರರು ನೀಡಿರುವ ತೀರ್ಪನ್ನು ಗೌರವಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ಡಿಸಿಎಂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡಿರುವ ತೀರ್ಪನ್ನು ಒಪ್ಪುತ್ತೇವೆ. ಕಾಂಗ್ರೆಸ್ ಎಲ್ಲಿ ಎಡವಿದೆ ಎಂಬುದನ್ನು ಪರಿಶೀಲಿಸುತ್ತೇವೆ ಎಂದರು.
ಹರಿಯಾಣದಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿತ್ತು. ಆದರೆ ಸಾಧ್ಯವಾಗಿಲ್ಲ. ಮತದಾರರು ನೀಡಿರುವ ತೀರ್ಪನ್ನು ಎಲ್ಲರೂ ಗೌರವಿಸಲೇಬೇಕು ಎಂದು ಹೇಳಿದರು.