
ನವದೆಹಲಿ: ಜನವರಿಯಿಂದಲೇ ಭಾರತೀಯರಿಗೆ ಕೊರೋನಾ ಲಸಿಕೆ ಸಿಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.
ಸುರಕ್ಷಿತ ಕೊರೋನಾ ಲಸಿಕೆ ಜನವರಿ ತಿಂಗಳಿನಿಂದ ಬಳಕೆಗೆ ರೆಡಿಯಾಗಿದೆ. ಲಸಿಕೆಯ ಸುರಕ್ಷತೆ, ಪರಿಣಾಮಕಾರಿತ್ವ ನಮ್ಮ ಮೊದಲ ಆದ್ಯತೆಯಾಗಿದೆ. ತುರ್ತು ಬಳಕೆಗೆ ಅನುಮತಿ ಕೋರಿ ಸಲ್ಲಿಕೆಯಾದ ಲಸಿಕೆಗಳ ಪರಿಶೀಲನೆ ಮುಂದುವರೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.