![](https://kannadadunia.com/wp-content/uploads/2021/12/pratapgarh-news-court_1635333673.jpeg)
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ಹರ್ಷ ಹತ್ಯೆಯ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಘಟನೆ ನಡೆದ ಮರುದಿನವೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ನಂತರ ಹಂತಹಂತವಾಗಿ 10 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ, ತನಿಖೆ ಮುಂದುವರೆದಿದೆ. ಇಂದಿಗೆ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಲಾಗಿದೆ.