ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಾದ್ಯಂತ ಪೋಲೀಸರ ಸರ್ಪಗಾವಲು ಹಾಕಲಾಗಿದೆ.
ತೀರ್ಥಹಳ್ಳಿ ರಸ್ತೆ ಸೀಗೆಹಟ್ಟಿಯ ಹರ್ಷನ ಮನೆಯ ಸುತ್ತಮುತ್ತ ಆರ್.ಎ.ಎಫ್. ಸಿಬ್ಬಂದಿ ಕಾವಲು ಹಾಕಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ದಿನಾಂಕ:22-02-2022 ರಂದು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಫೆಬ್ರವರಿ 23ರ ಮುಂಜಾನೆಯವರೆಗೆ ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ. ಲಕ್ಷ್ಮೀಪ್ರಸಾದ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.