alex Certify BIG NEWS: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮೇಲೆ ಹಲ್ಲೆ, ದರ್ಪ ಪ್ರಕರಣ; ಇಬ್ಬರು ಆರೋಪಿಗಳ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮೇಲೆ ಹಲ್ಲೆ, ದರ್ಪ ಪ್ರಕರಣ; ಇಬ್ಬರು ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಹಾಗೂ ಪತಿ ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಹಾಗೂ ದರ್ಪ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಿಚಿತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 341, 323, 393, 427, 504ರ ಅಡಿ ಎಫ್ ಐ ಆರ್ ದಾಖಲಾಗಿದೆ.

ಕಾರು ತೆಗೆಯುವ ವಿಚಾರಕ್ಕೆ ಗಲಾಟೆ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಪುಲಕೇಶಿನಗರದ ಹೋಟೆಲ್ ಬಳಿ ಈ ಘಟನೆ ನಡೆದಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...