alex Certify ಹೊಟ್ಟೆನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದು ಪೋಷಕರಿಗೆ ಶಾಕ್; 12 ವರ್ಷದ ಬಾಲಕಿ ಗರ್ಭಿಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಟ್ಟೆನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದು ಪೋಷಕರಿಗೆ ಶಾಕ್; 12 ವರ್ಷದ ಬಾಲಕಿ ಗರ್ಭಿಣಿ

ಚಂಡಿಗಢ: ಲೈಂಗಿಕ ದೌರ್ಜನ್ಯದ ಮತ್ತೊಂದು ಘಟನೆಯಲ್ಲಿ ಹರ್ಯಾಣದ ಯಮುನಾ ನಗರ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯ ಮೇಲೆ 48 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ. ಜನವರಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೊಟ್ಟೆನೋವಿನ ಕಾರಣದಿಂದ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ನಂತರ ಪರೀಕ್ಷಿಸಿದ ವೈದ್ಯರು ಆಕೆ ಗರ್ಭಿಣಿಯಾಗಿರುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿರುವ 12 ವರ್ಷದ ವಿದ್ಯಾರ್ಥಿನಿ ಕುಟುಂಬದ ಸದಸ್ಯರೊಂದಿಗೆ ಯಮುನಾ ನಗರದ ಹೊಲವೊಂದರಲ್ಲಿ ಡೇರಾದಲ್ಲಿ ವಾಸವಾಗಿದ್ದಾಳೆ.

ಇದೇ ಪ್ರದೇಶದಲ್ಲಿ ಕಳೆದ ಆರೇಳು ವರ್ಷಗಳಿಂದ ವಾಸವಾಗಿರುವ ನಾಥಿರಾಮ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಜೂನ್ 3 ರಂದು ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ ಗರ್ಭಿಣಿ ಎನ್ನುವುದು ಗೊತ್ತಾಗಿದೆ.

ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಜನವರಿಯಲ್ಲಿ ತಾನು ಮನೆಯಲ್ಲಿ ಒಂಟಿಯಾಗಿದ್ದ ವೇಳೆ ನಾಥಿರಾಮ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿಸಿದ್ದಾಳೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ. ಹುಡುಗಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...