ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಬಿಜೆಪಿಯ ಹ್ಯಾಟ್ರಿಕ್ ಕನಸು ಭಗ್ನವಾಗಿದೆ. ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೇರುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ಹೇಳಿವೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಹುಮತಕ್ಕೆ 46 ಸ್ಥಾನ ಗಳಿಸಬೇಕಿದೆ.
ಧ್ರುವ ಸಮೀಕ್ಷೆಯಂತೆ ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬರುವ ಸಾಧ್ಯತೆ ಇದೆ. ಧ್ರುವ ರಿಸರ್ಚ್ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 57, ಬಿಜೆಪಿ 27, ಇತರರು 7 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.
ಮ್ಯಾಟ್ರಿಜ್ ಸಮೀಕ್ಷೆಯ ಪ್ರಕಾರ ಬಿಜೆಪಿ 18 ರಿಂದ 24, ಕಾಂಗ್ರೆಸ್ 55 ರಿಂದ 62, ಇತರರು 9 ಸ್ಥಾನ ಗಳಿಸುವ ಸಾಧ್ಯತೆ ಇದೆ.
ಎನ್.ಡಿ.ಟಿ.ವಿ. ಸಮೀಕ್ಷೆ ಪ್ರಕಾರ ಬಿಜೆಪಿ 20 -22. ಕಾಂಗ್ರೆಸ್ 42 -61, ಇತರರು 3-5 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.
ಪೀಪಲ್ಸ್ ವಾಯ್ಸ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 49 -61, ಕಾಂಗ್ರೆಸ್ 20-32, ಇತರರು 7 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.