ಗುರುಗ್ರಾಮ್: ಹರಿಯಾಣ ಸರ್ಕಾರ ಬಿಪಿಎಲ್ ಕುಟುಂಬಗಳಿಗೆ 5000 ರೂ. ಆರ್ಥಿಕ ನೆರವು ಪ್ರಕಟಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದ ದೇಶದಲ್ಲಿ ಜನ ಸಂಕಷ್ಟಕ್ಕೆ ಒಳಗಾಗಿದ್ದು, ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಸೋಮವಾರ ಆರ್ಥಿಕ ನೆರವು ನೀಡುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಜೀವನೋಪಾಯ ಸ್ಥಗಿತಗೊಂಡಿರುವುದರಿಂದ 5000 ರೂ. ನೆರವು ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮೇ 10 ರಿಂದ 17ರವರೆಗೆ ಒಂದು ವಾರ ‘ಸುರಕ್ಷಿತ ಹರಿಯಾಣ್’ ಘೋಷಿಸಲಾಗಿದೆ. ಕಳೆದವಾರ ಜಾರಿ ಮಾಡಲಾಗಿದ್ದ ಲಾಕ್ ಡೌನ್ ನಿಯಮಗಳಿಗೆ ಹೆಚ್ಚುವರಿ ನಿರ್ಬಂಧಗಳನ್ನು ಸೇರಿಸಲಾಗಿದ್ದು, ಅದು ಮುಂದುವರೆಯಲಿದೆ. ಮದುವೆ ಮತ್ತು ಅಂತ್ಯಕ್ರಿಯೆಯಲ್ಲಿ 11ಕ್ಕೂ ಹೆಚ್ಚು ಜನ ಸೇರುವಂತಿಲ್ಲ. ಯಾವುದೇ ಮೆರವಣಿಗೆ ಮಾಡುವಂತಿಲ್ಲ ಎಂದು ಹೇಳಿದ್ದಾರೆ.