ನವದೆಹಲಿ: ಹರಿಯಾಣ ಇಂಡಿಯನ್ ನ್ಯಾಷನಲ್ ಲೋಕದಳ (ಐಎನ್ಎಲ್ಡಿ) ಮುಖ್ಯಸ್ಥ ನಫೆ ಸಿಂಗ್ ರಾಠಿ ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತ ಶೂಟರ್ ಗಳನ್ನು ಗೋವಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಝಜ್ಜರ್ ಪೊಲೀಸರು, ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಹರಿಯಾಣ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಜಂಟಿ ಕಾರ್ಯಾಚರಣೆಯಲ್ಲಿ ಸೌರವ್ ಮತ್ತು ಆಶಿಶ್ ಎಂಬ ಇಬ್ಬರು ಶೂಟರ್ಗಳನ್ನು ಗೋವಾದಿಂದ ಬಂಧಿಸಲಾಗಿದೆ. ಇತರ ಇಬ್ಬರು ಶೂಟರ್ ಗಳನ್ನು ಬಂಧಿಸಲು ಶೋಧ ನಡೆಯುತ್ತಿದೆ ಎಂದು ಝಜ್ಜರ್ ಪೊಲೀಸರು ತಿಳಿಸಿದ್ದಾರೆ.
ಕಳೆದ ತಿಂಗಳು ದೆಹಲಿ ಬಳಿಯ ಬಹದ್ದೂರ್ಗಢದಲ್ಲಿ ಅಪರಿಚಿತ ದಾಳಿಕೋರರು ಎಸ್ಯುವಿ ಮೇಲೆ ಹಲವಾರು ಸುತ್ತು ಗುಂಡು ಹಾರಿಸಿದ್ದರಿಂದ ಹರಿಯಾಣ ಭಾರತೀಯ ರಾಷ್ಟ್ರೀಯ ಲೋಕ ದಳ (ಐಎನ್ಎಲ್ಡಿ) ಮುಖ್ಯಸ್ಥ ನಫೆ ಸಿಂಗ್ ರಾಠಿ ಮತ್ತು ಪಕ್ಷದ ಕಾರ್ಯಕರ್ತ ಸಾವನ್ನಪ್ಪಿದ್ದರು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. ಭದ್ರತೆಗಾಗಿ ನೇಮಿಸಿದ್ದ ಮೂವರು ಖಾಸಗಿ ಬಂದೂಕುಧಾರಿಗಳು ಸಹ ದಾಳಿಯಲ್ಲಿ ಗಾಯಗೊಂಡಿದ್ದರು.