ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಹೀಗಾಗಿ ಅವರು ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದಾರೆ.
ಖರ್ಗೆ ಅವರಿಗೆ ಅನಾರೋಗ್ಯದ ಕಾರಣ ಪ್ರಯಾಣ ಮಾಡದಂತೆ ವೈದ್ಯರು ತಿಳಿಸಿದ್ದು, ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಪ್ರಚಾರದ ಭಾಗವಹಿಸಿಲ್ಲವೆಂದು ಹೇಳಲಾಗಿದೆ.
ವೈದ್ಯರು ವಿಶ್ರಾಂತಿಗೆ ಸೂಚಿಸಿದ ನಂತರ ಹರಿಯಾಣದಲ್ಲಿ ಸೋಮವಾರ ಪಕ್ಷದ ಪ್ರಚಾರದಿಂದ ಹೊರಗುಳಿಯಲಿದ್ದಾರೆ. ಖರ್ಗೆ ಅವರು ಸೋಮವಾರ ಅಂಬಾಲಾ ನಗರದಲ್ಲಿ ಮತ್ತು ಕರ್ನಾಲ್ ಜಿಲ್ಲೆಯ ಘರೌಂಡಾದಲ್ಲಿ ಎರಡು ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು.
ಕಾಂಗ್ರೆಸ್ ಅಧ್ಯಕ್ಷರಿಗೆ ಇಂದು ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ ಏಕೆಂದರೆ ಅವರಿಗೆ ವಿಶ್ರಾಂತಿ ಸೂಚಿಸಲಾಗಿ ಎಂದು ಪಕ್ಷದ ನಾಯಕರೊಬ್ಬರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯಿಂದ ಅಧಿಕಾರ ಹಿಡಿಯಲು ಕಾಂಗ್ರೆಸ್ ಹವಣಿಸುತ್ತಿದೆ.