ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ,ಜಾರ್ಜ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು, ಹರಿಯಾಣ, ಪಂಜಾಬ್ ನಿಂದ ವಿದ್ಯುತ್ ಖರೀದಿ ಮಾಡಲಾಗುವುದು, ಈ ಸಂಬಂಧ ಚರ್ಚೆ ನಡೆದಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಯವರ ಸೂಚನೆಯಂತೆ ರೈತರಿಗೆ 5 ತಾಸು ನಿರಂತರ ವಿದ್ಯುತ್ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ, ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ 5 ತಾಸು ವಿದ್ಯುತ್ ನೀಡುವ ಸಂಬಂಧ ವಿದ್ಯುತ್ ಖರೀದಿ ಮಾಡಿ, ವಿದ್ಯುತ್ ಸಮಸ್ಯೆ ಪರಿಹರಿಸಲಾಗುವುದು ಎಂದು ಹೇಳಿದ್ದಾರೆ.