alex Certify ಕಾಲೇಜಿನ 3ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜಿನ 3ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ಚಂಡೀಗಢ: ಇಲ್ಲಿಯ ಯಮುನಾ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಬಿದ್ದಿರುವ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಧಾವಿಸಿದೆವು. ಇದಕ್ಕೆ ಕಾರಣ ಇನ್ನೂ ಬೆಳಕಿಗೆ ಬಂದಿಲ್ಲ. ಇದು ಆತ್ಮಹತ್ಯೆಯೋ, ಆಕಸ್ಮಿಕವೋ, ಕೊಲೆಯೋ ಗೊತ್ತಿಲ್ಲ ಎಂದು ಯಮುನಾನಗರ ನಗರ ಪೊಲೀಸ್ ಎಸ್‌ಎಚ್‌ಒ ಕವಲ್ಜಿತ್ ಸಿಂಗ್ ತಿಳಿಸಿದ್ದಾರೆ.

ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆದರೆ ಅದಾಗಲೇ ಆಕೆ ಮೃತಪಟ್ಟಿದ್ದಳು ಎಂದು ಪೊಲೀಸರು ಹೇಳಿದ್ದಾರೆ. ವಿದ್ಯಾರ್ಥಿನಿ ಎಂಎಲ್ಎನ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು. ಘಟನೆಯ ಹಿಂದಿನ ಕಾರಣವನ್ನು ಇನ್ನೂ ತನಿಖೆ ಮಾಡಬೇಕಾಗಿದೆ ಎಂದು ಎಸ್‌ಎಚ್‌ಒ ಕವಲ್ಜಿತ್ ಸಿಂಗ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...