
ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, ರಸ್ತೆಯಲ್ಲಿ ನೆರೆದಿದ್ದ ಜನ ಸಮೂಹದ ಸಮ್ಮುಖದಲ್ಲಿಯೇ ಈ ಘಟನೆ ಸಂಭವಿಸಿದೆ. ಕಾರು ಚಾಲಕ ಕಾರನ್ನು ನಿಲ್ಲಿಸದೇ ವ್ಯಕ್ತಿಯನ್ನು 100 ಮೀಟರ್ ದೂರದವರೆಗೆ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಅಲ್ಲದೇ ಕಾರು ಚಾಲಕ ಕಾರನ್ನು ನಿಲ್ಲಿಸದೇ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಪಂಚಕುಲದ ಸೆಕ್ಟರ್ 20ರ ಐಷಾರಾಮಿ ಕ್ಲಬ್ನ ಹೊರಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರನ್ನು ನಿಲ್ಲಿಸುವ ಸಂದರ್ಭದಲ್ಲಿ ಕಾರು ಚಾಲಕ ಯುವಕನಿಗೆ ಡಿಕ್ಕಿ ಹೊಡೆದಿದ್ದು ಮಾತ್ರವಲ್ಲದೇ ಆತನನ್ನು 100 ಮೀಟರ್ ದೂರ ಎಳೆದೊಯ್ದಿದ್ದಾನೆ. ಕೂಡಲೇ ಕಾರು ಚಾಲಕ ಸ್ಥಳದಿಂದ ಎಸ್ಕೇಪ್ ಕೂಡ ಆಗಿದ್ದಾನೆ.
ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಪೊಲೀಸರಿಗೆ ಆಗ್ರಹಿಸಿದ್ದಾರೆ.
ವರದಿಗಳ ಪ್ರಕಾರ, ಪಂಚಕುಲದ ಸೆಕ್ಟರ್ 20ರಲ್ಲಿ ಕ್ಲಬ್ನ ಹೊರಗಡೆ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ 2 ಗುಂಪುಗಳ ನಡುವೆ ಘರ್ಷಣೆ ಸಂಭವಿಸಿತ್ತು ಎನ್ನಲಾಗಿದೆ. ಇದಾದ ಬಳಿಕ ಎರಡು ಗುಂಪುಗಳ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿತ್ತು.
ಒಂದು ಗುಂಪಿನವರು ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸುತ್ತಿದ್ದರು. ಆದರೆ ಮತ್ತೊಂದು ಗುಂಪಿಗೆ ಸೇರಿದ್ದ ಯುವಕ ಕಾರನ್ನು ನಿಲ್ಲಿಸಲು ಯತ್ನಿಸುತ್ತಿದ್ದ ಎನ್ನಲಾಗಿದೆ. ಆಗ ಆರೋಪಿಯು ಯುವಕನ ಮೇಲೆಯೇ ಕಾರನ್ನು ಹತ್ತಿಸಿದ್ದಾನೆ ಎಂದು ತಿಳಿದು ಬಂದಿದೆ.