ಬೆಂಗಳೂರು : ಕರ್ನಾಟಕದಲ್ಲಿ ‘ಹನುಮಾನ್ ಚಾಲೀಸಾ’ ನಿಷೇಧ ಆಗಿದ್ಯಾ..? ಎಂದು ಸಿಎಂ ಸಿದ್ದರಾಮಯ್ಯಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಮೊಬೈಲ್ ಅಂಗಡಿ ಶಾಪ್ ಮಾಲೀಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದಲ್ಲಿ ಹನುಮಾನ್ ಚಲೀಸಾ ನಿಷೇಧ ಮಾಡಲಾಗಿದೆಯೇ ಸಿಎಂ ಸಿದ್ದರಾಮಯ್ಯನವರೇ? ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ, ಮಿತಿಮೀರಿದ ಓಲೈಕೆಯಿಂದ ಮೂಲಭೂತವಾದಿ ಮುಸ್ಲಿಮರಿಗೆ ನಾವು ಏನು ಮಾಡಿದರೂ ನಡೆಯುತ್ತೆ ಎನ್ನುವ ಮೊಂಡು ಧೈರ್ಯ ಬಂದಿದ್ದು, ಬೆಂಗಳೂರಿನ ಶಿವಾಜಿನಗರದ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಂ ಯುವಕರ ಗುಂಪೊಂದು ಹಿಂದೂಗಳ ಮೇಲೆ ಹಲ್ಲೆ ನಡೆಸಿದೆ. ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಅನ್ನುವುದೇ ಇಲ್ಲದಂತಾಗಿದ್ದು, ಜನಸಾಮಾನ್ಯರು ರಕ್ಷಣೆ ಇಲ್ಲದೆ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು
ಆರ್.ಅಶೋಕ್ ಹೇಳಿದ್ದಾರೆ.