alex Certify BIG NEWS: ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು; ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು; ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ

ಹಾಸನ: ಪತ್ನಿಯನ್ನು ಹತ್ಯೆಗೈದು ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ದಂಪತಿಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಕೆ.ಹೊಸಕೊಪ್ಪಲಿನಲ್ಲಿ ನಡೆದಿದೆ.

ಹೊಳೆನರಸಿಪುರದ ದೇವರಾಜು (43), ಮಂಜುಳಾ (36) ಮೃತರು. ಕೆ.ಹೊಸಕೊಪ್ಪಲಿನಲ್ಲಿ ದಂಪತಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮನೆಯಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಮನೆ ಬೀಗ ಒಡೆದು ಒಳೆಗೆ ನೋಡಿದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತಿ ದೇವರಾಜು ಶವ ಪತ್ತೆಯಾಗಿದ್ದು, ಮಂಚದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತ್ನಿ ಮಂಜುಳಾ ಶವ ಪತ್ತೆಯಾಗಿದೆ.

ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...