ಹಾಸನ: ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಕಾಡಾನೆ ಸೆರೆ ಕಾರ್ಯಾಚರಣೆ ಮತ್ತೆ ಶುರುವಾಗಿದೆ. ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ ಹೆಚ್ಚಾಗಿದ್ದು, ಹಲವು ಗ್ರಾಮಗಳಲ್ಲಿ ಜನರು ಜೀವ ಭಯದಲ್ಲಿ ಬದುಕುವಂತಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಆನೆ ಸೆರೆ ಕಾರ್ಯಾಚರಣೆ ಆರಂಭಿಸಿದೆ.
ಪುಂಡಾನೆ ಸೆರೆಗೆ ಇಂದು ದಸರಾ ಆನೆ ಅಭಿಮನ್ಯು ಎಂಟ್ರಿಕೊಂಟ್ಟಿದ್ದು, ಒಟ್ಟು 8 ಆನೆಗಳು ಕಾಡಾನೆ ಸೆರೆ ಕಾರ್ಯಾಚಾರಣೆಯಲ್ಲಿ ಭಾಗವಹಿಸಿವೆ.
ಡಿ.4ರದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದಸರಾ ಆರ್ನೆ ಅರ್ಜುನ ಕಾಡಾನೆ ದಾಳಿಯಿಂದ ಮೃತಪಟ್ಟಿತ್ತು. ಬಳಿಕ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಅರ್ಜುನ ಆನೆಯನ್ನು ಬಲಿ ಪಡೆದ ಕಾಡಾನೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದು, ಆನೆ ಸೆರೆ ಕಾರ್ಯಾಚರಣೆ ಚುರುಕುಗೊಂಡಿದೆ.