
ಹಾಸನ: ಪ್ರೀತಿ ನಿರಾಕರಿಸಿದಕ್ಕೆ ಯುವತಿಯೊಬ್ಬಳು ಯುವಕನ ಮೇಲೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಮನು ಕುಮಾರ್ ಹಲ್ಲೆಗೊಳಗಾಗಿರುವ ಯುವಕ. ಡಿ.31ರ ಮಧ್ಯರಾತ್ರಿ ಮನು ಕುಮಾರ್ ಮೇಲೆ ಯುವತಿ ಹಲ್ಲೆ ನಡೆಸಿದ್ದು, ಘಟನೆ ತದವಾಗಿ ಬೆಳಕಿಗೆ ಬಂದಿದೆ. ಗಂಭೀರವಾಗಿ ಗಾಯಗೊಂದಿರುವ ಯುವಕ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಹೊಸ ವರ್ಷಾಚರಣೆ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಮನು ಗೆಳತಿ ಆತನ ಮೇಲೆ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿದ್ದಾಳೆ. ಹಾಸನ ಬಡಾವಣೆ ಠಾಣೆಯಲ್ಲಿ ಕೊಲೆ ಯತ್ನ ಕೇಸ್ ದಾಖಲಾಗಿದೆ.