alex Certify ಸಾಮಾಜಿಕ ಹೋರಾಟಗಾರನಿಂದಲೇ ಹೇಯ ಕೃತ್ಯ; ಅಪ್ರಾಪ್ತ ಬಾಲಕಿ ಮೇಲೆ 73 ವರ್ಷದ ವೃದ್ಧನಿಂದ ಅತ್ಯಾಚಾರ; ಬಾಲಕಿ ಗರ್ಭಿಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಹೋರಾಟಗಾರನಿಂದಲೇ ಹೇಯ ಕೃತ್ಯ; ಅಪ್ರಾಪ್ತ ಬಾಲಕಿ ಮೇಲೆ 73 ವರ್ಷದ ವೃದ್ಧನಿಂದ ಅತ್ಯಾಚಾರ; ಬಾಲಕಿ ಗರ್ಭಿಣಿ

ಹಾಸನ: ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ರಾಜ್ಯದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ 73 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ಮೀಸೆ ಮಂಜಯ್ಯ (73) ಎಂಬ ವೃದ್ಧ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಮೀಸೆ ಮಂಜಯ್ಯ ಸಾಮಾಜಿಕ ಹೋರಾಟಗಾರ ಎಂದು ತಿಳಿದುಬಂದಿದೆ.

ಆರೋಪಿ ಮೀಸೆ ಮಂಜಯ್ಯನನ್ನು ವಶಕ್ಕೆ ಪಡೆದಿರುವ ಪೊಲೀಸರು ವೈದ್ಯಕೀಯ ತಪಾಸಣೆ ನಡೆಸಿ, ವಿಚಾರಣೆ ನಡೆಸಿದ್ದಾರೆ. ಇನ್ನು ಮೀಸೆ ಮಂಜಯ್ಯ ವಿಧವಾ ವೇತನ, ಪಿಂಚಣಿ ಹಣ ಕೊಡಿಸುವುದಾಗಿ ಹೇಳಿ ಹಲವು ಮಹಿಳೆಯರಿಗೆ ಮೋಸ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇನ್ನೊಂದೆಡೆ ಮಗಳು ಗರ್ಭಿಣಿ ಎಂಬ ವಿಷಯ ತಿಳಿದ ಬಾಲಕಿ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹಿಳೆಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...