alex Certify ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ

ಹಾಸನ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ವೇಗವಾಗಿ ಬಂದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ 18 ವರ್ಶದ ಧೀರಜ್ ಹಾಗೂ 49 ವರ್ಷದ ಜಗದೀಶ್ ಮೃತಪಟ್ಟಿದ್ದಾರೆ. ಮೃತರು ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ನಿವಾಸಿಗಳು ಎಂದು ತಿಳಿದುಬಂದಿದೆ.

ಮೃತ ಜಗದೀಶ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಚನ್ನರಾಯಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕುಟುಂಬ ಸಮೇತ ತೆರಳಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...