ಹಾಸನ: ನಾಡಿನ ಪ್ರಮುಖ ದೇವತೆಗಳಲ್ಲಿ ಒಂದಾದ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ.
ಅ. 26 ರಂದು ಸಾರ್ವಜನಿಕ ದರ್ಶನಕ್ಕೆ ಕೊನೆಯ ದಿನವಾಗಿದೆ. ಅ. 13 ರಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆದು ಅ. 14 ರಿಂದ ಸಾಮಾನ್ಯ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಂದಿನಿಂದ 5 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ.
ಅ. 26 ರಂದು ಸಂಜೆ 4 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಇರುತ್ತದೆ. ಸಂಜೆ 4:30 ರಿಂದ ನೈವೇದ್ಯ ಇರುವುದರಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪೂಜೆಯ ನಂತರ ದೇವಾಲಯದ ಬಾಗಿಲು ಬಂದ್ ಮಾಡಲಾಗುವುದು ಎಂದು ಹೇಳಲಾಗಿದೆ.