ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನ ಅಂತ್ಯವಾಗಿದೆ.
ಈ ಬಾರಿ ದಾಖಲೆಯ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯಕ್ಕೆ 9 ಕೋಟಿ ರೂಪಾಯಿಗೂ ಅಧಿಕ ಆದಾಯ ಬಂದಿದೆ.
ಹಾಸನಾಂಬೆ ಗರ್ಭಗುಡಿಯ ಬಾಗಿಲು ಮುಚ್ಚಲು ಕ್ಷಣಗಣನೆ ಶುರುವಾಗಿದ್ದು, ಭಕ್ತರಿಂದ ದೇವಾಲಯ ಆವರಣ ತುಂಬಿ ತುಳುಕುತ್ತಿದೆ. ಬೆಳಗ್ಗೆ 11 50ರ ನಂತರ ವಿಶ್ವರೂಪ ದರ್ಶನದ ನಂತರ ಗರ್ಭಗುಡಿ ಬಾಗಿಲನ್ನು ಬಂದ್ ಮಾಡಲಾಗುತ್ತದೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಶಾಸಕ ಸ್ವರೂಪ್, ಜಿಲ್ಲಾಧಿಕಾರಿ ಸತ್ಯಭಾಮಾ, ಎಸ್ಪಿ ಮೊಹಮ್ಮದ್ ಸುಜಿತಾ, ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಅಕ್ಟೋಬರ್ 24ರಂದು ಹಾಸನಾಂಬ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು.