ಹಾಸನ: ಹಾಸನದ ಇತಿಹಾಸ ಪ್ರಸಿದ್ಧ ಹಾಸನಾಂಬೆ ಜಾತ್ರಾ ಮಹೋತ್ಸವ ಅಕ್ಟೋಬರ್ 13 ರಿಂದ 27 ರ ವರೆಗೆ ನಡೆಯಲಿದೆ.
ಈ ಬಾರಿ ದೇವಿಯ ದರ್ಶನಕ್ಕೆ 15 ದಿನ ಅವಕಾಶ ಮಾಡಿಕೊಡಲಾಗಿದೆ. ಕೊರೋನಾ ಕಾರಣದಿಂದ ಕಳೆದು ಎರಡು ವರ್ಷಗಳಿಂದ ಸರಳವಾಗಿ ಆಚರಿಸಲಾಗಿದ್ದ ಹಾಸನಾಂಬ ಜಾತ್ರಾ ಮಹೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಸಕ ಪ್ರೀತಂಗೌಡ ತಿಳಿಸಿದ್ದಾರೆ.
ಮೊದಲ ಮತ್ತು ಕೊನೆಯ ದಿನ ಹಾಗೂ ಗ್ರಹಣದ ದಿನದಂದು ಸಾರ್ವಜನಿಕರಿಗೆ ದೇವಿಯ ದರ್ಶನ ಇರುವುದಿಲ್ಲ. ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುವುದರಿಂದ ಭಕ್ತರಿಗೆ ಯಾವುದೇ ಕೊರತೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.