ಹಾಸನ : ಹಾಸನದ ಶಕ್ತಿದೇವತೆ ‘ಹಾಸನಾಂಬೆ’ ದೇವಾಲಯದ ಬಾಗಿಲು ಓಪನ್ ಆಗಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಅರಸು ವಂಶಸ್ಥರು ಬಾಳೆಕಂದು ಕಡಿದು ನಂತರ ಗರ್ಭಗುಡಿಯ ಬಾಗಿಲು ಓಪನ್ ಮಾಡಲಾಗಿದೆ. ಇದಾದ ಬಳಿಕ ದೇವಿಯ ಗರ್ಭಗುಡಿ ಸ್ವಚ್ಚ ಮಾಡಿ ಪೂಜಾ ಕೈಂಕರ್ಯ ನೆರವೇರಿಸಲಾಗುತ್ತದೆ. ನಾಳೆಯಿಂದ ನವೆಂಬರ್3 ರವರೆಗೆ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಈ ವೇಳೆ ಹಾಸನ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಮತ್ತಿತರರಿದ್ದರು.
ಹಾಸನಾಂಬ ದರ್ಶನಕ್ಕೆ ಬರುವ ಭಕ್ತರಿಗೆ ಜಿಲ್ಲೆಯ ಪ್ರವಾಸಿ ತಾಣ ಹಾಗೂ ಪ್ರಸಿದ್ಧ ದೇಗುಲಗಳಿಗೆ ಬೆಳಗ್ಗೆ ತೆರಳಿ ಸಂಜೆ ವಾಪಸ್ ಕರೆತರಲು ಕೆಎಸ್ಆರ್ಟಿಸಿ ವತಿಯಿಂದ ‘ಪ್ಯಾಕೇಜ್ ಟೂರ್” ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 3 ರವರೆಗೆ ಭಕ್ತರು ದೇವಿಯ ದರ್ಶನ ಪಡೆಯಬಹುದಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಎಲ್ಲಾ ರೀತಿಯ ಸಕಲ ಸಿದ್ದತೆ ಮಾಡಿಕೊಂಡಿದೆ.
ಕೃಷ್ಣಪ್ಪ ನಾಯಕನ ಕಾಲದಿಂದಲೂ ಆಶ್ವೀಜ ಮಾಸ ಪೌರ್ಣಮಿಯ ನಂತರ ಬರುವ ಗುರುವಾರದಂದು ಹಾಸನಾಂಬೆಯ ದೇವಾಲಯ ತೆರೆಯಲ್ಪಡುತ್ತದೆ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತಾದಿಗಳು ಅಂದು ದರ್ಶನಾಕಾಂಕ್ಷಿಗಳಾಗಿ ಬಂದು ದೇವಿಯ ದರ್ಶನ ಪಡೆಯುತ್ತಾರೆ.
ಹೀಗೆ ವರ್ಷಕ್ಕೊಮ್ಮೆ ದೇಗುಲದ ಬಾಗಿಲ ಪುರ ಪ್ರಮುಖರಾದ ತಹಸಿಲ್ದಾರರು/ ಕಮೀಷನರ್ ಶಾಸಕರು ಮುಂತಾದವರ ಸಮ್ಮುಖದಲ್ಲಿ ತೆರೆಯಲಾಗುತ್ತದೆಯಲ್ಲದೇ, ಬಲಿಪಾಡ್ಯಮಿಯ ಮಾರನೇ ದಿನ ಬಾಗಿಲು ಅವರೆಲ್ಲರ ಸಮ್ಮುಖದಲ್ಲಿ ದೇವಿಗೆ ದೀಪ, ಅಕ್ಕಿ ನೈವಿದ್ಯಾದಿ ಅಲಂಕಾರಗಳು ಇರುವಂತೆಯೇ ಮುಚ್ಚಲಾಗುತ್ತದೆ.