ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದಲ್ಲಿ ಕಳೆದ ಎಂಟು ದಿನದಲ್ಲಿ 18 ಲಕ್ಷ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ನಾಳೆ ಮುಂಜಾನೆ ನಾಲ್ಕು ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದೆ.
ಆದಾಯ ಸಂಗ್ರಹದಲ್ಲಿಯೂ ಈ ಬಾರಿ ಹಾಸನಾಂಬ ದೇವಾಲಯ ದಾಖಲೆ ಬರೆದಿದೆ. ಎಂಟು ದಿನದಲ್ಲಿ 8 ಕೋಟಿ ರೂ. ಸಂಗ್ರಹವಾಗಿದೆ. ವಿಶೇಷ ಪಾಸ್, ಲಡ್ಡು ಪ್ರಸಾದ ಮಾರಾಟದಿಂದ 8 ಕೋಟಿ ರೂಪಾಯಿ ಸಂಗ್ರಹವಾಗಿದೆ.
ದರ್ಶನಕ್ಕೆ ಇಂದೇ ಕೊನೆ ದಿನವಾಗಿದ್ದು, ನಾಳೆ ಬೆಳಗಿನ ಜಾವ 4 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿರುತ್ತದೆ. ನಂತರ ಪೂಜಾ ವಿಧಿ ವಿಧಾನಗಳೊಂದಿಗೆ ದೇವಾಲಯದ ಬಾಗಿಲನ್ನು ಮುಚ್ಚಲಾಗುವುದು.
ಇಂದು ಬೆಳಗ್ಗೆ 9 ಗಂಟೆಯವರೆಗೆ ಸುಮಾರು 8 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಕಳೆದ ವರ್ಷ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದು, ಈ ವರ್ಷ ಎಂಟು ದಿನದಲ್ಲಿ ಬರೋಬ್ಬರಿ 18 ಲಕ್ಷ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.