alex Certify BIG NEWS: ಹಾಸನಾಂಬೆ ಉತ್ಸವಕ್ಕೆ ವಿದ್ಯುಕ್ತ ತೆರೆ; ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಾಸನಾಂಬೆ ಉತ್ಸವಕ್ಕೆ ವಿದ್ಯುಕ್ತ ತೆರೆ; ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕ ನಿಗದಿ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ದರ್ಶನ ಪ್ರಸಕ್ತ ವರ್ಷ ಸಂಪನ್ನವಾಗಿದ್ದು, ಇದೇ ವೇಳೆ ಮುಂದಿನ ವರ್ಷ ಹಾಸನಾಂಬೆ ದರ್ಶನದ ದಿನಾಂಕವನ್ನು ನಿಗದಿ ಮಾಡಲಾಗಿದೆ.

ಈ ವರ್ಷ 14 ದಿನಗಳ ಕಾಲ ನಡೆದಿದ್ದ ಹಾಸನಾಂಬೆ ದರ್ಶನ ಅವಕಾಶಕ್ಕೆ ಇಂದು ಮಧ್ಯಾಹ್ನ ವಿದ್ಯುಕ್ತ ತೆರೆ ಬಿದ್ದಿದೆ. ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಸಲ್ಲಿಸಲ್ಲಿಸಿದ ಬಳಿಕ ಮಧ್ಯಾಹ್ನ 12:23ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸಮ್ಮುಖದಲ್ಲಿ ಹಾಸನಾಂಬೆ ಗರ್ಭಗುಡಿಯ ಬಾಗಿಲು ಬಂದ್ ಮಾಡಲಾಯಿತು. ಗರ್ಭಗುಡಿ ಬಾಗಿಲಿಗೆ ಪೂಜೆ ಸಲ್ಲಿಸುವ ಮೂಲಕ ಬೀಗ ಹಾಕಲಾಯಿತು.

ಮುಂದಿನ ವರ್ಷ ಹಾಸನಾಂಬೆ ದೇವಿಯ ದರ್ಶನದ ದಿನಾಂಕವನ್ನು ಈ ವೇಳೆ ಪ್ರಕಟಿಸಲಾಗಿದ್ದು, ಮುಂದಿನ ವರ್ಷ ಅಕ್ಟೋಬರ್ 24 ರಿಂದ ನವೆಂಬರ್ 4ರವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...