ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅದಿದೇವತೆ ಹಾಸನಾಂಬೆ ದೇವಾಲಯದ ಬಾಗಿಲು ಇಂದು ಶಾಸ್ತ್ರೋಕ್ತವಾಗಿ ಮುಚ್ಚಲಾಗಿದೆ.ಈ ಮೂಲಕ ಈ ವದರ್ಷ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಮುಂದಿನ ವರ್ಷ ಮತ್ತೆ ದೇವಾಲಯದ ಬಾಗಿಲು ತೆರೆಯಲಿದೆ.
ಹಾಸನಂಬೆ ದೇವಿಗೆ ವಿಶೇಷ ಪೂಜೆ, ಸ್ವಚ್ಛತೆ, ಸಿಂಗಾರ ಪೂಜಾ ಕೈಂಕೈರ್ಯದ ಬಳಿಕ ಶಾಸ್ತ್ರೋಕ್ತವಾಗಿ ದೇವಾಲಯದ ಬಾಗಿಲು ಮುಚ್ಚಲಾಯಿತು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ಬಾಗಿಲು ಮುಚ್ಚಲಾಯಿತು.
ಮುಂದಿನ ವರ್ಷ ಅಕ್ಟೋಬರ್ 9ರಂದು ಮತ್ತೆದೇವಾಲಯದ ಬಾಗಿಲು ತೆರೆಯಲಿದೆ. ಈ ವರ್ಷ ಅ.25ರಿಂದ ನವೆಂಬರ್ 3ರವರೆಗೆ ಹಾಸನಾಂಬ ದೇವಾಲಯದ ಬಾಗಿಲು ತೆರೆದಿತ್ತು. ಇಂದು ಬೆಳಿಗ್ಗೆ 6ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಈ ಬಾರಿ 18 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದು ಪುನೀತರಾಗಿದ್ದಾರೆ. 9 ದಿನಗಳ ಸಾರ್ವಜನಿಕ ದರ್ಶನದಲ್ಲಿಇ ಬರೋಬ್ಬರಿ 9.3 ಕೋಟಿ ರೂ ಹಣ ಸಂಗ್ರಹವಾಗಿದೆ. ಇನ್ನು ಹುಂಡಿ ಎಣಿಕೆ ಕಾರ್ಯವಾಗಿಲ್ಲ. ಹುಂಡಿ ಎಣಿಕೆ ಬಳಿಕ ಒಟ್ಟು ಹರಿದುಬಂದ ಆದಾಯದ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.