alex Certify BREAKING NEWS: ಲಾರಿ –ಕಾರ್ ಡಿಕ್ಕಿ: ಅಪಘಾತದಲ್ಲಿ ಎಇಇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲಾರಿ –ಕಾರ್ ಡಿಕ್ಕಿ: ಅಪಘಾತದಲ್ಲಿ ಎಇಇ ಸಾವು

ಹಾಸನ: ಕಾರ್ – ಲಾರಿ ನಡುವೆ ಡಿಕ್ಕಿಯಾಗಿ ಲೋಕೋಪಯೋಗಿ ಇಲಾಖೆ ಎಇಇ ಮೃತಪಟ್ಟಿದ್ದಾರೆ. ಲೋಕೋಪಯೋಗಿ ಇಲಾಖೆ ಎಇಇ ಮೋಹನ್ ಕುಮಾರ್ ಮೃತಪಟ್ಟವರು ಎಂದು ಹೇಳಲಾಗಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಬಳಿ ನಡೆದ ಅಪಘಾತದಲ್ಲಿ ಸಕಲೇಶಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೋಹನ್ ಕುಮಾರ್ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...