
ಹಾಸನ: ಕಂಟೇನರ್ ಗೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹೊರವಲಯದಲ್ಲಿ ಭೀಕರ ದುರಂತ ಸಂಭವಿಸಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವುಕಂಡಿದ್ದಾರೆ. ಕಾರ್ ನಲ್ಲಿದ್ದ ಮಂಜುನಾಥ, ಚೇತನ್, ವಿಕ್ರಂ, ಅಭಿಷೇಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಸ್ನೇಹಿತರು ತೆರಳುತಿದ್ದರು. ನಿಯಂತ್ರಣ ತಪ್ಪಿದ ಕಾರ್ ಮಂಗಳೂರಿನತ್ತ ಹೊರಟಿದ್ದ ಕಂಟೇನರ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಚನ್ನರಾಯಪಟ್ಟಣ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆನ್ನಲಾಗಿದೆ.