ಹಾಸನ: ಹಾಸನ ಜಿಲ್ಲೆಯ ನುಗ್ಗೆಹಳ್ಳಿ -ತಿಪಟೂರು ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಕಾರೆಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲೋಕೇಶ ಆಚಾರಿ, ಲಕ್ಷ್ಮಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟವರು ಎನ್ನಲಾಗಿದೆ.
ನುಗ್ಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.