
ಹಾಸನ: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಸಮೀಪ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್(60), ಕುಮಾರ(55) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ದಿನೇಶ್ ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪಾದಯಾತ್ರೆಯ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.