alex Certify ಫೋಷಕರ ಎದುರಲ್ಲೇ ಕಂದಮ್ಮಗಳ ದೇಹ ಛಿದ್ರ: ಭೀಕರ ಅಪಘಾತದಲ್ಲಿ ಅವಳಿ ಮಕ್ಕಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೋಷಕರ ಎದುರಲ್ಲೇ ಕಂದಮ್ಮಗಳ ದೇಹ ಛಿದ್ರ: ಭೀಕರ ಅಪಘಾತದಲ್ಲಿ ಅವಳಿ ಮಕ್ಕಳು ಸಾವು

ಹಾಸನ: ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮಕ್ಕಳೊಂದಿಗೆ ಇದ್ದ ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವಳಿ ಮಕ್ಕಳಾದ ಮೂರು ವರ್ಷದ ಪ್ರಣವ್ ಮತ್ತು ಪ್ರಣತಿ ಮೃತಪಟ್ಟರೆಂದು ಹೇಳಲಾಗಿದೆ. ಶಿವಾನಂದ್ ಮತ್ತು ಅವರ ಪತ್ನಿ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಾಸನದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಲಾರಿ ಚಕ್ರಕ್ಕೆ ಸಿಲುಕಿ ಮಕ್ಕಳ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಪರಾರಿಯಾಗಲೆತ್ನಿಸಿದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದೆ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಹಾಸನ ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...