ಹಾಸನ: ವಕೀಲನ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಸಮೀಪ ನಡೆದಿದೆ.
ವಕೀಲ ದುಷ್ಯಂತ್ ಹಲ್ಲೆಗೊಳಗಾದವರು. ನಿನ್ನೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದ ದುಷ್ಯಂತ್ ಅವರ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ದುಷ್ಯಂತ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ವಕೀಲ ವೃತ್ತಿ ಜೊತೆಗೆ ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದರು ಎನ್ನಲಾಗಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.