ಹಾಸನ: ಹಾಸನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ. ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯ ವೇದಿಕೆಯಲ್ಲಿ ಪಕ್ಷದ ಮುಖಂಡ ಹೆಚ್.ಕೆ. ಮಹೇಶ್ ಅವರಿಗೆ ಸೀಟು ಸಿಕ್ಕಿಲ್ಲವೆಂದು ಬೆಂಬಲಿಗರು ಗದ್ದಲ ಮಾಡಿದ್ದಾರೆ.
ಕಾರ್ಯಕರ್ತರ ವರ್ತನೆಗೆ ಸಚಿವ ಚಲುವರಾಯ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಹೀಗೆಲ್ಲಾ ಗಲಾಟೆ ಮಾಡಿದರೆ ನಾನು ಹೊರಟು ಹೋಗುತ್ತೇನೆ. 40 ವರ್ಷದಲ್ಲಿ ಈ ರೀತಿಯ ಸಭೆ ನೋಡಿಲ್ಲ. ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ಸರಿ ಮಾಡಿಕೊಂಡು ಹೋಗೋಣ. ಗಲಾಟೆ ಮಾಡಬೇಡಿ, ಹೇಳುವುದನ್ನು ಸಮಾಧಾನದಿಂದ ಕೇಳಿಸಿಕೊಳ್ಳಿ ಎಂದು ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದಾರೆ.