ಹಾಸನ: ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಗುಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮನೆಯ ಬಳಿ ಸ್ವಚ್ಛತೆ ಮಾಡುತ್ತಿದ್ದಾಗ ಗೋಡೆ ಕುಸಿದು 52 ವರ್ಷದ ನಾಗರಾಜ್ ಸಾಮೃತಪಟ್ಟಿದ್ದಾರೆ. ಕೂಲಿ ಕೆಲಸಕ್ಕೆ ತೆರಳಿದ್ದ ಪತ್ನಿ, ಪುತ್ರ ವಾಪಸ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.