
ಹಾಸನ: ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ ಮಾಡಲಾಗಿದೆ.
ಹಾಸನ, ಸಕಲೇಶಪುರ, ಆಲೂರು, ಬೇಲೂರು, ಹೊಳೆನರಸೀಪುರ, ಅರಕಲಗೂಡು ತಾಲೂಕಿನ ಎಲ್ಲಾ ಶಾಲೆಗಳಿಗೂ ಶುಕ್ರವಾರವೂ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆಯೂ ರಜೆ ನೀಡಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಸೂಚನೆಯಂತೆ ಡಿಡಿಪಿಐ ಹೆಚ್.ಕೆ. ಪಾಂಡು ಆದೇಶಿಸಿದ್ದಾರೆ.
ಶಿವಮೊಗ್ಗದಲ್ಲಿ 3 ತಾಲೂಕುಗಳಲ್ಲಿ ರಜೆ
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಮೂರು ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಸಾಗರ, ಸೊರಬ, ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಶುಕ್ರವಾರ ಆಯಾ ತಾಲೂಕು ತಹಶೀಲ್ದಾರ್ ಗಳು ರಜೆ ಘೋಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ರಜೆ
ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆಯೂ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಲೆ ಸಾಧ್ಯತೆ ಹಿನ್ನಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಇರುವುದಿಲ್ಲ.