alex Certify ಸತತ 7ನೇ ಬಾರಿಗೆ ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಹೆಚ್.ಡಿ. ರೇವಣ್ಣ ಅವಿರೋಧ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ 7ನೇ ಬಾರಿಗೆ ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಹೆಚ್.ಡಿ. ರೇವಣ್ಣ ಅವಿರೋಧ ಆಯ್ಕೆ

ಹಾಸನ: ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಸತತ 7ನೇ ಬಾರಿಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಾಸನದ ಹಾಮುಲ್ ಸಭಾಂಗಣದಲ್ಲಿ ನಡೆದ ಆಡಳಿತ ಮಂಡಳಿ ನಿರ್ದೇಶಕರ ಸಭೆಯಲ್ಲಿ ರೇವಣ್ಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ದೇಶಕರು ಒಪ್ಪಿಗೆ ನೀಡಿದ್ದಾರೆ. 1985ರಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಹೆಚ್.ಡಿ. ರೇವಣ್ಣ 1994 ರಿಂದ ಸತತವಾಗಿ ಹಾಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅವರು 2024 ರಿಂದ 2029 ರವರೆಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. 14 ಮಂದಿ ನಿರ್ದೇಶಕರ ಸ್ಥಾನಕ್ಕೆ ಇತ್ತೀಚೆಗೆ ಚುನಾವಣೆ ನಡೆದು ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...