ಹಾಸನ: ಹಾಸನದಲ್ಲಿ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ನಗರದ ಲಕ್ಷ್ಮಿಪುರ ಬಡಾವಣೆಯಲ್ಲಿ ಪ್ರಕಾಶ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಪ್ರಕಾಶ್ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿದ್ದಾರೆ. ಜೆಡಿಎಸ್ ನಗರಸಭೆ ಸದಸ್ಯ ಪ್ರಶಾಂತ್ ಬೈಕ್ ನಲ್ಲಿ ತೆರಳುವಾಗ ಹಿಂಬಾಲಿಸಿ ಬಂದ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.