alex Certify ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ

ಹಾಸನ: ಮಾರಕಾಸ್ತ್ರದಿಂದ ಚುಚ್ಚಿ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆ ಬೇಲೂರಿನ ಪಂಪ್ ಹೌಸ್ ರಸ್ತೆಯಲ್ಲಿ ನಡೆದಿದೆ.

36 ವರ್ಷದ ಪತ್ನಿ ಅಶ್ವಿನಿಯನ್ನು ಕೊಲೆ ಮಾಡಿ ಪತಿ ಜಗದೀಶ್ ಪರಾರಿಯಾಗಿದ್ದಾನೆ. ಕೌಟುಂಬಿಕ ಸಮಸ್ಯೆಯಿಂದ ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. 17 ವರ್ಷದ ಹಿಂದೆ ಅಶ್ವಿನಿ -ಜಗದೀಶ್ ಪ್ರೀತಿಸಿ ಮದುವೆಯಾಗಿದ್ದರು. ದಂಪತಿ ನಡುವೆ ಜಗಳವಾಗಿ ಪತಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...