
ಹಾಸನ: ಹಾಸನ ಜಿಲ್ಲೆ ಆಲೂರು ತಾಲೂಕಿನ ಮಗ್ಗೆ ಗ್ರಾಮದಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ.
ಭರತ್(27) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಚಾಕು ಇರಿತಕ್ಕೆ ಒಳಗಾಗಿ ರಕ್ತಸ್ರಾವದಿಂದ ಸ್ಥಳದಲ್ಲೇ ಭರತ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಆಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.