
ಹಾಸನ: ಹಾಸನದಲ್ಲಿ ಕರ್ತವ್ಯನಿರತ ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಚಿಕಿತ್ಸೆಗೆ ಬಂದಿದ್ದ ರೋಗಿಯ ಕಡೆಯವರು ಹಲ್ಲೆ ನಡೆಸಿದ್ದಾರೆ.
ಹಾಸನದ ಹಿಮ್ಸ್ ವೈದ್ಯಕೀಯ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಕೆಲಸ ಬಹಿಷ್ಕರಿಸಿ ವೈದ್ಯರು, ವಿದ್ಯಾರ್ಥಿಗಳು, ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ. ತಡರಾತ್ರಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಕೆಲವು ಯುವಕರು ಬಂದಿದ್ದರು. ಚಿಕಿತ್ಸೆ ನೀಡುವಾಗ ವಿನಾಕಾರಣ ಕ್ಯಾತೆ ತೆಗೆದು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಹಾಸನ ನಗರ ವ್ಯಾಪ್ತಿಯಲ್ಲಿ ತಡರಾತ್ರಿ ಘಟನೆ ನಡೆದಿದೆ.