ಬೆಂಗಳೂರು: ಹಾಸನದಲ್ಲಿ ಡಿ. 5 ರಂದು ಸ್ವಾಭಿಮಾನಿ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಸಮಾವೇಶದ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಾಗುವುದು. ಮೈಸೂರು ಭಾಗದ ಕಾಂಗ್ರೆಸ್ ನಾಯಕರಗೆ ಸಭೆಗೆ ಆಹ್ವಾನ ನೀಡಲಾಗಿದೆ.
ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ, ಚಿಕ್ಕಮಗಳೂರು ಭಾಗದ ಕಾಂಗ್ರೆಸ್ ಮುಖಂಡರಿಗೆ ಸಭೆಗೆ ಬರುವಂತೆ ಡಿಸಿಎಂ ಡಿಕೆ ಸೂಚನೆ ನೀಡಿದ್ದಾರೆ. ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಸೇರಿ ಎಲ್ಲಾ ನಾಯಕರು ಸಭೆಗೆ ಬರುವಂತೆ ತಿಳಿಸಲಾಗಿದೆ.