
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಾಲಯದ ಆದಾಯದಲ್ಲಿ ಭಾರಿ ಏರಿಕೆಯಾಗಿದೆ.
9 ದಿನದ ದರ್ಶನದಲ್ಲಿ 4.5 ಕೋಟಿ ರೂಪಾಯಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ವಿಶೇಷ ಪಾಸ್, ಲಡ್ಡು ಪ್ರಸಾದ ಮಾರಾಟದಿಂದ ಕೋಟಿ ಕೋಟಿ ಆದಾಯ ಹರಿದು ಬಂದಿದೆ. 4.56 ಕೋಟಿ ರೂ. ಆದಾಯ ಸಂಗ್ರಹವಾಗಿದ್ದು, ಹಾಸನಾಂಬೆ ದರ್ಶನೋತ್ಸವ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಆದಾಯ ಬಂದಿದೆ. ಇನ್ನೂ ಮೂರು ದಿನ ಬಾಕಿ ಇರುವಾಗಲೇ ಕೋಟಿ ಕೋಟಿ ರೂಪಾಯಿ ಆದಾಯ ಬಂದಿದೆ.